ಕರ್ನಾಟಕ ರಾಜ್ಯ ಸರ್ಕಾರದ ಬೃಹತ್ ಯೋಜನೆಯಾದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ವಿರುದ್ಧ ಪ್ರಥಮ ಹಂತದ ಪ್ರತಿಭಟನೆ ಇಂದು ಶಿವಮೊಗ್ಗದಲ್ಲಿ ನಡೆಯಿತು

 







ಕರ್ನಾಟಕ ರಾಜ್ಯ ಸರ್ಕಾರದ ಬೃಹತ್ ಯೋಜನೆಯಾದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ವಿರುದ್ಧ ಪ್ರಥಮ ಹಂತದ ಪ್ರತಿಭಟನೆ ಇಂದು ಶಿವಮೊಗ್ಗದಲ್ಲಿ ನಡೆಯಿತು 

ಶಿವಮೊಗ್ಗದಲ್ಲಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಮುಂದುವರಿಸಲು ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪರಿಸರ ಪ್ರೇಮಿಗಳು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಯೋಜನೆ ರದ್ದುಗೊಳಿಸುವಂತೆ ರಾಜ್ಯ ಸರಕಾರಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗಮನಾರ್ಹವಾಗಿ, ಕಾಲೇಜು ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರು ಪ್ರತಿಭಟನಾಕಾರರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ. ಆದರೆ, ಮಲೆನಾಡಿನ ನಾಗರೀಕರು, ಕನ್ನಡಪರ ಸಂಘಟನೆಗಳು, ಕೇವಲ ಫೋಟೋ ಪ್ರಚರಗಳಿಗೆ ಸೀಮಿತವಾಗಿರುವ ಸ್ವಯಂ ಘೋಷಿತ ಸ್ವಯಂಸೇವಕರು, ಭಾಗವಹಿಸದಿರುವುದು ಆತಂಕಕ್ಕೆ ಕಾರಣವಾಗಿತ್ತು. ಈ ಹಿಂದೆ 2019 ಜುಲೈ 10 ರಲ್ಲಿ ಶಿವಮೊಗ್ಗದ ತಾಲೂಕಿನಾದ್ಯಂತ ಸಂಘ ಸಂಸ್ಥೆಗಳ, ವಿದ್ಯಾರ್ಥಿಗಳ ತೀವ್ರ ವಿರೋಧದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಶರಾವತಿ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಇಂದು ನಡೆದ ಪ್ರತಿಭಟನೆಯು ಸುದೀರ್ಘ ಪ್ರಯತ್ನದ ಆರಂಭವನ್ನು ಸೂಚಿಸುತ್ತದೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ