ಶಿವಮೊಗ್ಗ, ಜುಲೈ 2: ಅಜ್ಜಿ ಹತ್ಯೆ ಪ್ರಕರಣದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯ ಗುನ್ನೆ ಸಂಖ್ಯೆ 236/2026ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103(1) ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿ **ಕಿಶೋರ್ (26)**ನನ್ನು ಬಂಧಿಸಲು ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜಪೇಯಿ ಬಡಾವಣೆಗೆ ತೆರಳಿದ್ದರು. ಈ ವೇಳೆ ಆರೋಪಿ ಕಿಶೋರ್ಗೆ ಶರಣಾಗುವಂತೆ ಪೊಲೀಸರು ಎಚ್ಚರಿಕೆ ನೀಡಿದರು. ಆದರೆ ಆತ ತನ್ನ ಬಳಿಯಿದ್ದ ಚಾಕುವಿನಿಂದ ಪೊಲೀಸ್ ಸಿಬ್ಬಂದಿ ಗಣೇಶ್ (CPC-1070) ಅವರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದನೆಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹಾಗೂ ಸಿಬ್ಬಂದಿಯ ಸುರಕ್ಷತೆಯ ದೃಷ್ಟಿಯಿಂದ ದೊಡ್ಡಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಮೊದಲು ಒಂದು ಸುತ್ತು ಗುಂಡನ್ನು ಗಾಳಿಯಲ್ಲಿ ಹಾರಿಸಿ ಎಚ್ಚರಿಕೆ ನೀಡಿದರು. ಆದರೂ ಆರೋಪಿ ಶರಣಾಗದ ಹಿನ್ನೆಲೆಯಲ್ಲಿ ಮತ್ತೊಂದು ಸುತ್ತು ಗುಂಡನ್ನು ಆರೋಪಿಯ ಎಡ ಕಾಲಿಗೆ ಹಾರಿಸಿ ವಶಕ್ಕೆ ಪಡೆದರು. ಬಳಿಕ ಕಂಟ್ರೋಲ್ ರೂಮ್ಗೆ ಮಾಹಿತಿ ನೀಡಲಾಗಿದ್ದು, ಗಾಯಗೊಂಡ ಪೊಲೀಸ್ ಸಿಬ್ಬಂದಿ ಗಣೇಶ್ ಹಾಗೂ ಆರೋಪಿ ಕಿಶೋರ್ ಅವರನ್ನು ಇಲಾಖೆಯ ವ...
ಫೋಟೋ ಕ್ರೆಡಿಟ್ : AI ಆಪ್ ಶಿವಮೊಗ್ಗ, ಜುಲೈ 1: ನಗರದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಬುಧವಾರ ಸಂಜೆ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗಾಂಜಾ ಚಾಳಿಯ ವಿರುದ್ಧ ಪೊಲೀಸರಿಗೆ ದೂರು ನೀಡಲು ತೆರಳುತ್ತಿದ್ದ ವೃದ್ಧೆಯನ್ನು ಆಕೆಯ ಮೊಮ್ಮಗನೇ ಸೈಜುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆನಂದರಾವ್ ಬಡಾವಣೆಯ ತಖ್ವಾ ಮಸೀದಿ ಸಮೀಪದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತ ವೃದ್ಧೆಯು ತನ್ನ ಮೊಮ್ಮಗ ಕಿಶೋರ್ನ ಗಾಂಜಾ ವ್ಯಸನ ಮತ್ತು ಚಟುವಟಿಕೆಗಳ ಬಗ್ಗೆ ಹಲವು ಬಾರಿ ಪೊಲೀಸರಿಗೆ ದೂರು ನೀಡುತ್ತಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ಬುಧವಾರ ಸಂಜೆ ಸಹ ದೂರು ನೀಡಲು ಹೊರಟಿದ್ದ ವೇಳೆ, ಕಿಶೋರ್ ಅಜ್ಜಿಯೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ವೃದ್ಧೆ ಕೆಳಗೆ ಬಿದ್ದ ಬಳಿಕ, ಆಕೆಯ ತಲೆಯ ಮೇಲೆ ಸೈಜುಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆಯೇ ಎಂಬ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷೆಯಲ್ಲಿದೆ. ಮುಖ್ಯವಾಗಿ , ಮಿಳಘಟ್ಟ ಪ್ರದೇಶದಲ್ಲಿ ಗಾಂಜಾ ಮಾರಾಟ ಮತ್ತು ವ್ಯಸನ ಹೆಚ್ಚುತ್ತಿರುವ ಬಗ್ಗೆ ಈ ಹಿಂದೆಯೇ ಸ್ಥಳೀಯರು ಪೊಲೀಸ್ ಇಲಾಖೆಗೆ ಹಲವು ಬಾರಿ...
ಎಂ. ಕೆ. ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್ನ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು, ಮಾಜಿ ನಗರಸಭಾ ಅಧ್ಯಕ್ಷರು, ಕೋಟೆ ಮಾರಿಕಾಂಬ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು, ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಸಮಿತಿಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎಂ. ಕೆ. ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ಅವರು ಇಂದು ದೈವಾಧೀನರಾದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ. ಸಾರ್ವಜನಿಕ ಜೀವನದಲ್ಲಿ ತಮ್ಮ ಸೇವೆ, ಸಾಮಾಜಿಕ ಕಳಕಳಿ ಹಾಗೂ ನಾಯಕತ್ವದ ಮೂಲಕ ಅವರು ಸಮಾಜಕ್ಕೆ ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಅಪಾರ ಸ್ನೇಹಿತರಿಗೆ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ. ಓಂ ಶಾಂತಿ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ