ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು
ಶಿವಮೊಗ್ಗ, ಜುಲೈ 2: ಅಜ್ಜಿ ಹತ್ಯೆ ಪ್ರಕರಣದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯ ಗುನ್ನೆ ಸಂಖ್ಯೆ 236/2026ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103(1) ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿ **ಕಿಶೋರ್ (26)**ನನ್ನು ಬಂಧಿಸಲು ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜಪೇಯಿ ಬಡಾವಣೆಗೆ ತೆರಳಿದ್ದರು. ಈ ವೇಳೆ ಆರೋಪಿ ಕಿಶೋರ್ಗೆ ಶರಣಾಗುವಂತೆ ಪೊಲೀಸರು ಎಚ್ಚರಿಕೆ ನೀಡಿದರು. ಆದರೆ ಆತ ತನ್ನ ಬಳಿಯಿದ್ದ ಚಾಕುವಿನಿಂದ ಪೊಲೀಸ್ ಸಿಬ್ಬಂದಿ ಗಣೇಶ್ (CPC-1070) ಅವರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದನೆಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹಾಗೂ ಸಿಬ್ಬಂದಿಯ ಸುರಕ್ಷತೆಯ ದೃಷ್ಟಿಯಿಂದ ದೊಡ್ಡಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಮೊದಲು ಒಂದು ಸುತ್ತು ಗುಂಡನ್ನು ಗಾಳಿಯಲ್ಲಿ ಹಾರಿಸಿ ಎಚ್ಚರಿಕೆ ನೀಡಿದರು. ಆದರೂ ಆರೋಪಿ ಶರಣಾಗದ ಹಿನ್ನೆಲೆಯಲ್ಲಿ ಮತ್ತೊಂದು ಸುತ್ತು ಗುಂಡನ್ನು ಆರೋಪಿಯ ಎಡ ಕಾಲಿಗೆ ಹಾರಿಸಿ ವಶಕ್ಕೆ ಪಡೆದರು. ಬಳಿಕ ಕಂಟ್ರೋಲ್ ರೂಮ್ಗೆ ಮಾಹಿತಿ ನೀಡಲಾಗಿದ್ದು, ಗಾಯಗೊಂಡ ಪೊಲೀಸ್ ಸಿಬ್ಬಂದಿ ಗಣೇಶ್ ಹಾಗೂ ಆರೋಪಿ ಕಿಶೋರ್ ಅವರನ್ನು ಇಲಾಖೆಯ ವ...

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ