ಶಾಸಕ ಟಿ.ರಘುಮೂರ್ತಿ ಅವರಿಂದ ಹಸಿರು ನಿಶಾನೆ ಪೊಲೀಸ್ ಇಲಾಖೆಗೆ ವಾಹನ ಹಸ್ತಾಂತರ

 

ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ಬುಧವಾರ ಬುಲೆರೋ ನಿಯೋ ಹೊಸ ಮಾದರಿಯ ವಾಹನವನ್ನು ಪೊಲೀಸ್ ಇಲಾಖೆಗೆ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಹಸ್ತಾಂತರಿಸಿದರು.

      ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿಯವರು 2024-25ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅಂದಾಜು ರೂ.11.7 ಲಕ್ಷ ವೆಚ್ಚದಲ್ಲಿ ಒಂದು ಬುಲೆರೋ ನಿಯೋ ವಾಹನವನ್ನು ಪೊಲೀಸ್ ಇಲಾಖೆಗೆ ನೀಡಿದ್ದಾರೆ.

      ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ಚಳ್ಳಕೆರೆ ಪೊಲೀಸ್ ಉಪಾಧೀಕ್ಷಕ ರಾಜಣ್ಣ, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಶಶಿಕುಮಾರ್, ತಿಮ್ಮಣ್ಣ, ಮುತ್ತುರಾಜ್, ಉಮೇಶ್ ಸೇರಿದಂತೆ ಮತ್ತಿತರರು ಇದ್ದರು.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ