ಸಾಮಾಜಿಕ ನ್ಯಾಯವೇ ಅಂಬೇಡ್ಕರ್ ದೃಷ್ಠಿಕೋನದ ಆತ್ಮ
ಸುದ್ದಿ ಮಾಧ್ಯಮದ ಆತ್ಮ ಆಗಿರುವ ವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೌಲ್ಯವೂ ಇದೇ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್.ಸಿ, ಎಸ್.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮøತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ ಎಂದು ವಿಷಾದ ವ್ಯಕ್ತಪಡಿಸಿದರು. ಈ ಹೊತ್ತಿನ ಬಹಳ ಪತ್ರಕರ್ತರ ಕೈಯಲ್ಲಿ ವಿಚಾರ, ವಿಮರ್ಶೆಗಿಂತ ಹೆಚ್ಚಾಗಿ ಪೆಟ್ರೋಲ್, ಬೆಂಕಿಪೆÇಟ್ಟಣವೇ ಹೆಚ್ಚಾಗಿ ಕಂಡುಬರುತ್ತದೆ. ಕಡ್ಡಿ ಗೀರಿ ಬೆಂಕಿ ಹಚ್ಚುವ ಅವಕಾಶ...