ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಯಂತ್ರಿಸುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ : ಶಾಸಕ ಡಿ ಎಸ್ ಅರುಣ್

 

  ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಕರ್ನಾಟಕ ರಾಜ್ಯದ ಜನರನ್ನ ದಿಕ್ಕು ತಪ್ಪಿಸುವ ಕಾರ್ಯತಂತ್ರ ರೂಪಿಸಲು ಆರ್ ಎಸ್ ಎಸ್ ಸಂಘಟನೆಯನ್ನು ಬಳಸಿಕೊಳ್ಳುತ್ತಿದೆ. ನಿರಂತರವಾಗಿ ಕೇಳಿ ಬರುತ್ತಿರುವ ಅಧಿಕಾರ ಹಂಚಿಕೆ, ಮುಖ್ಯಮಂತ್ರಿಯ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ, ಸಚಿವರ ರಾಜೀನಾಮೆ, ಕ್ಷೇತ್ರ ಅಭಿವೃದ್ಧಿಗೆ ಮತ್ತು ಶಾಸಕರ ನಿಧಿಗೆ ಯಾವುದೇ ಅನುದಾನ ನೀಡದೆ ಹಾಗೂ ಇತ್ತೀಚೆಗೆ ನಡೆಯುತ್ತಿರುವ ಜಾತಿ ಸಮೀಕ್ಷೆಯಲ್ಲಿ ಅತಿಹೆಚ್ಚಿನ ತೊಡಕುಗಳು ಹೀಗೆ ನಿರಂತರ ಸರ್ಕಾರದ ಎಡವಟ್ಟುಗಳನ್ನು ಮರೆಮಾಚಲು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ರಾಜ್ಯ ಸರ್ಕಾರ ಯಾವುದೇ ರೀತಿಯ ನಿರ್ಬಂಧಗಳನ್ನು ಮಾಡಿದರು ಸಹ ರಾಷ್ಟ್ರೀಯ ಸ್ವಯಂಸೇವಕ ಸಂಘ ತಡೆಯುವುದಕ್ಕೂ ಸಾಧ್ಯವಿಲ್ಲ ಹಾಗೂ ನಿರಂತರ ಚಟುವಟಿಕೆಗಳನ್ನು ನಿಲ್ಲಿಸುವುದಕ್ಕೆ ಆಗುವುದಿಲ್ಲ. ಯಾಕೆಂದರೆ

     ಒಂದು ಲಕ್ಷದ ಇಪ್ಪತೊಂಬತ್ತು ಸಾವಿರಕ್ಕಿಂತ ಹೆಚ್ಚು ಸೇವಾ ಕಾರ್ಯಗಳನ್ನು ನಿರಂತರವಾಗಿ ಇಡೀ ರಾಷ್ಟ್ರದಲ್ಲಿ ಮಾಡಿಕೊಂಡು ಬರುತ್ತದೆ. ಭಾರತದಲ್ಲಿ ಅಷ್ಟೇ ಅಲ್ಲದೆ ಪ್ರಪಂಚದಲ್ಲಿ ಹಲವು ಕಡೆ ಶಾಖೆಗಳನ್ನು ನಡೆಸುತ್ತಿದೆ. ಹಾಗಾಗಿ ಇಂದು ನಿಮ್ಮ ದುರಾಡಳಿತ ಭ್ರಷ್ಟಾಚಾರವನ್ನು ಮರೆಮಾಚುವುದಕ್ಕೆ ಈ ಕೆಲಸಕ್ಕೆ ಕೈ ಹಾಕಿರೋದು ನಿಮ್ಮ ದೌರ್ಭಾಗ್ಯ.

      ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ರಾಜಕೀಯವನ್ನು ಹೊರತುಪಡಿಸಿ ನಿಷ್ಪಕ್ಷಪಾತವಾಗಿ ತಾಳುವುದು ಅಗತ್ಯವೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ ಎಸ್ ಅರುಣ್ ಅವರು ಬಹಿರಂಗ ಪತ್ರ ಮುಖೇನ ತಿಳಿಸಿದ್ದಾರೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ