ಕಂಬನಿಯ ವಿದಾಯ
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (IAS Officer Mahantesh Bilagi) ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.
ಅವರು ತಮ್ಮ ಜನಸ್ನೇಹಿ ಕಾರ್ಯಗಳಿಂದ ರಾಜ್ಯದಲ್ಲಿ ಹೆಸರಾಗಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ