ಮಕ್ಕಳಲ್ಲಿ ಶಿಸ್ತು ಬೆಳೆಸುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ


ಶಿವಮೊಗ್ಗ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಶಿಸ್ತಿನ ಸಂಸ್ಥೆಯಾಗಿದ್ದು, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸುತ್ತಿರುವ ಸಂಸ್ಥೆಯಾಗಿದೆ ಎಂದು ಜಿಲ್ಲಾಧಿಕಾರಿ   ಹಾಗೂ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ನ  ಜಿಲ್ಲಾ ಸಂಸ್ಥೆಯ ಅಧ್ಯಕ್ಷರು ಗುರುದತ್ ಹೆಗಡೆ ಹೇಳಿದರು. ಜಿಲ್ಲಾಧಿಕಾರಿಗಳ ಆವರಣದಲ್ಲಿ

 ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜ ಚೀಟಿ ಬಿಡುಗಡೆಗೊಳಿಸಿ ಮಾತನಾಡಿ, ಸಂಸ್ಥೆಯು ಅನೇಕ ರೀತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎತ್ತರಕ್ಕೆ ಬೆಳೆಯುತ್ತಿದ್ದು, ಅದರ ಬೆಳವಣಿಗೆಗೆ ನಾವೆಲ್ಲರೂ ಕೈ ಜೋಡಿಸೋಣ, ನಿಮ್ಮೊಂದಿಗೆ ನಾನು ಸದಾ ಇರುತ್ತೇನೆ ಎಂದು ತಿಳಿಸಿದರು. ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ನ ಜಿಲ್ಲಾ ಪ್ರಧಾನ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಮಾತನಾಡುತ್ತಾ

 ಸಂಸ್ಥಾಪನಾ ದಿನಾಚರಣೆ ಮಹತ್ವವನ್ನು ತಿಳಿಸುತ್ತ ಸ್ಕೌಟ್ಸ್ ಇತಿಹಾಸದ ಬಗ್ಗೆ ವಿವರಿಸಿದರು.

ಭಾರತದಲ್ಲಿ ಸ್ಕೌಟಿಂಗ್ ಗೈಡಿಂಗ್ ಬೆಳೆದು ಬಂದ ದಾರಿ ತಿಳಿಸಿ ಭಾರತಕ್ಕೆ ಸ್ವಾತಂತ್ರ್ಯ ಬರುವ ಮುನ್ನ ನ್ಯಾಷನಲ್ ಸ್ಕೌಟ್ ಅಸೋಸಿಯೇಷನ್, ಹಿಂದೂಸ್ತಾನ ಸ್ಕೌಟ್ಸ್ ಅಸೋಸಿಯೇಷನ್, ಗರ್ಲ್ ಗೈಡ್ ಅಸೋಸಿಯೇಷನ್ ಹೀಗೆ ಅನೇಕ ಸಂಘಟನೆಗಳಿದ್ದು, ಇವೆಲ್ಲವನ್ನು ಒಂದುಗೂಡಿ ಒಂದೇ ಸಂಘಟನೆ ಆಗಬೇಕೆಂದು ನಿರ್ಧರಿಸಿ ಪ್ರತಿಫಲವಾಗಿ 1950 ನವೆಂಬರ್ 7 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಅಸ್ತಿತ್ವಕ್ಕೆ ಬಂದಿತು ಎಂದು ತಿಳಿಸಿದರು.

 ಮಾತನಾಡಿದರು. ಎ.ವಿ.ರಾಜೇಶ್ ಮಾತನಾಡಿದರು. ಜಿಲ್ಲಾ ಆಯುಕ್ತ(ಸ್ಕೌಟ್ಸ್) ಎಸ್.ಜಿ.ಆನಂದ್ ಮತ್ತು ಜಿಲ್ಲಾ  ಕೇಂದ್ರ ಸ್ಥಾನಿಕಆಯುಕ್ತ ,  ಜಿ ವಿಜಯಕುಮಾರ್ ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ಸಹ ಕಾರ್ಯದರ್ಶಿ ವೈ.ಆರ್.ವೀರೇಶಪ್ಪ,  ಜಿಲ್ಲಾ ಸಹಾಯಕ ಆಯುಕ್ತರು ಮಲ್ಲಿಕಾರ್ಜುನ ಕಾನೂರು, ಕೃಷ್ಣಸ್ವಾಮಿ, ಶಿವಶಂಕರ್.. ಹೇಮಲತಾ    ಗೈಡ್ ಆಯುಕ್ತರಾದ. ಲಕ್ಷ್ಮೀ ರವಿ. ಗುರುಮೂರ್ತಿ ಟಿಜಿ. ರುದ್ರಪ್ಪ ಚೀಲೂರು. ನ್ಯಾಷನಲ್ ಪಬ್ಲಿಕ್ ಶಾಲೆಯ ಶಿಕ್ಷಕ. ಸೋಮಣ್ಣ 

ಸುನಂದಮ್ಮ  ನಗರದ ವಿವಿಧ ಶಾಲೆಯ 200 ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ