ಪ್ರತಿಯೊಬ್ಬರಿಗೂ ಎಲ್ಲ ಹಕ್ಕುಗಳು ದೊರಕುವುದು ಮುಖ್ಯ

 

ಶಿವಮೊಗ್ಗ: ಪ್ರತಿಯೊಬ್ಬ ಮನುಷ್ಯ ಸಮಾನವಾಗಿ ಸದೃಢವಾಗಿ ಬದುಕಬೇಕು. ಎಲ್ಲ ಹಕ್ಕುಗಳು ಮಾನವ ಹಕ್ಕುಗಳು. ಪ್ರತಿಯೊಬ್ಬ ಮನುಷ್ಯನು ನೆಮ್ಮದಿಯಿಂದ ಬದುಕಬೇಕು. ಅದೇ ವಿಶ್ವ ಮಾನವ ಹಕ್ಕುಗಳ ಮೂಲ ಉದ್ದೇಶ ಎಂದು ಉಪಪ್ರಧಾನ ಕಾನೂನು ನೆರವು ಅಭಿರಕ್ಷಕಿ ಇ.ಡಿ.ಅಶ್ವಿನಿ ಹೇಳಿದರು.

           ನಗರದ ಅನನ್ಯ ರೆಸಿಡೆನ್ಸಿಯಲ್ ಪಬ್ಲಿಕ್ ಸ್ಕೂಲ್‌ನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ಮಾನವ ಹಕ್ಕುಗಳ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

         ಪ್ರತಿಯೊಬ್ಬರೂ ಹಕ್ಕುಗಳ ಬಗ್ಗೆ ಅರಿತುಕೊಳ್ಳಬೇಕು. ಇನ್ನೊಬ್ಬರಿಗೆ ತೊಂದರೆ ಉಂಟು ಮಾಡಿ ಮಾನವನ ಹಕ್ಕುಗಳನ್ನು ಉಲ್ಲಂಘಿಸಿದರೆ ಶಿಕ್ಷೆಗೆ ಒಳಪಡಬೇಕಾಗುತ್ತದೆ. ಮಕ್ಕಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಇದರ ಬಗ್ಗೆ ಸರ್ಕಾರವು ಹೆಚ್ಚು ನಿಗಾ ವಹಿಸಿದೆ. ಆದರಿಂದ ಮಕ್ಕಳು ಈ ಕಾನೂನುಗಳನ್ನು ಅರಿತುಕೊಳ್ಳಬೇಕು ಎಂದು ಕರೆ ನೀಡಿದರು.

         ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ ಮಾತನಾಡಿ, ಜಾಗೃತಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಜೀವನದಲ್ಲಿ ಬೆಳಕು ಚೆಲ್ಲುವುದರ ಜೊತೆಗೆ ಅನಾಹುತಗಳಿಂದ ತಪ್ಪಿಸಿಕೊಳ್ಳಬಹುದು. ಮಕ್ಕಳು ಕಾನೂನುಗಳನ್ನು ಸಹ ಆರಿತುಕೊಳ್ಳಬೇಕು ಎಂದರು.

          ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ ಮಾತನಾಡಿ, ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೆ ಸಾರ್ವಜನಿಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

        ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುವಾರ್ ಮಾತನಾಡಿ, ಮಕ್ಕಳು ಶಿಕ್ಷಣದ ಜೊತೆಗೆ ಇಂತಹ ಕಾನೂನಿನ ಅರಿವಿನ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು. ಗುಡ್ ಟಚ್ ಮತ್ತು ಬ್ಯಾಡ್ ಟಚ್, ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು ಎಂದು ಹೇಳಿದರು.

        ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಬೆಂಗಳೂರು ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಿವಾಸ ಗೌಡ ಮಾತನಾಡಿ, ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದಲ್ಲಿ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ. ಈಗಾಗಲೇ ನಮ್ಮ ಸಂಸ್ಥೆಯಿಂದ ಸಾಕಷ್ಟು ಪ್ರಕರಣಗಳಿಗೆ ನ್ಯಾಯ ಒದಗಿಸಿದ್ದೇವೆ ಎಂದರು.

        ಅನನ್ಯ ರೆಸಿಡೆನ್ಸಿಯಲ್ ಪಬ್ಲಿಕ್ ಸ್ಕೂಲಿನ ಶಿಕ್ಷಕ ಆರ್.ಗಿರೀಶ್ ಅವರು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಮಾಹಿತಿ ನೀಡಿದರು. ಹಿರಿಯ ವಕೀಲ ಡಿ.ಎನ್.ಹಾಲಸಿದ್ದಪ್ಪ, ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ಪ್ರದೀಪ್ ಮೀತ್ತಲ್, ಸಂತೋಷ್ ಪೂಜಾರಿ, ಎಂ.ಎಂ.ಗೋಪಿ, ಎ.ಆರ್.ರವಿಕುಮಾರ್, ಶಮೀರ್ ಪಾಷಾ ಎನ್, ಪ್ರಮೀಳಾ ಕೆ ಆರ್, ಶಾಜಿಯಾ ಬಾನು, ಜೀವನ್ ಡಿ, ಶರತ್ ಕುಮಾರ್ ಎ, ಸುಧಾಕರ ಕೆ ಜಿ, ರವಿಕುಮಾರ್ ಇತರರಿದ್ದರು.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ