ಗಣೇಶ್‌ಬಿಳಿಗಿ ಅವರಿಗೆ ರಾಷ್ಟ್ರಕವಿ ಕುವೆಂಪು ಸದ್ಭಾವನ ರಾಜ್ಯ ಪ್ರಶಸ್ತಿ.

ಶಿವಮೊಗ್ಗ :  ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ಶಿವಮೊಗ್ಗ ತಾಲ್ಲೂಕ್ ಪಂಚಾಯತ್ ತೀರ್ಥಹಳ್ಳಿ, ಗ್ರಾಮ ಪಂಚಾಯಿತಿ ಹಣಗೆರೆ, ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ,ಪತಂಜಲಿ ಕರ್ನಾಟಕ ಜಾನಪದ ಕಲಾ ಕೇಂದ್ರ, ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟ, ಧರ್ಮಸ್ಥಳ ಸ್ವಸಹಾಯ ಸಂಘಗಳ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಕಾಶಕರು ಮತ್ತು ಸಂಪಾದಕರು ಕ್ರಾಂತಿಕಿಡಿ ಪತ್ರಿಕೆ ಹಾಗೂ ಗಣೇಶ್ ಗ್ರಾಫಿಕ್ಸ್ ನ ಮಾಲೀಕರು ಸಮಾಜ ಸೇವಕರು ಆದ ಶ್ರೀ ಗಣೇಶ್ ಬಿಳಗಿಯವರಿಗೆ ಮುದ್ರಣ ಪತ್ರಿಕೋದ್ಯಮ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಎಲೆಮರೆಯ ಕಾಯಿಯಂತೆ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ರಾಷ್ಟ್ರಕವಿ ಕುವೆಂಪು ಸದ್ಭಾವನಾ ರಾಜ್ಯ ಪ್ರಶಸ್ತಿಯನ್ನು ನೀಡಲಾಯಿತು.

ಈ ಪ್ರಶಸ್ತಿಯನ್ನು ಪಡೆದ ಗಣೇಶ ಬಿಳಗಿ ಯವರನ್ನು ಕೃಷಿಕ ಸಮಾಜದ ರಾಜ್ಯಾಧ್ಯಕ್ಷರಾದ ನಗರದ ಮಹದೇವಪ್ಪನವರು ಪತ್ರಿಕಾ ಕಚೇರಿಗೆ ಭೇಟಿ ನೀಡಿ ಗಣೇಶ ಅವರನ್ನು ಶಾಲು ಹೊದಿಸಿ ಸನ್ಮಾನ ಮಾಡಿ ಅಭಿನಂದಿಸಿದರು. 

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ