ಶಿವಮೊಗ್ಗ ಡಿಸಿ, ಎಸ್ಪಿ ವರ್ಗಾವಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.  ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ನಿಯೋಜಿಸಿದೆ.

       ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಸ್ಟೇಟ್‌ ಮೆಡಿಕಲ್‌ ಸಪ್ಲೈ ಕಾರ್ಪೊರೇಷನ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ಡಿಪಿಎಆರ್‌ ಆದೇಶದಲ್ಲಿ ತಿಳಿಸಲಾಗಿದೆ.

ಎಸ್ಪಿ ವರ್ಗಾವಣೆ:

     ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರ ವರ್ಗಾವಣೆಯಾಗಿದೆ. ಜಿಲ್ಲೆಯ ನೂತನ ವರಿಷ್ಠಾಧಿಕಾರಿಯಾಗಿ ಬಿ.ನಿಖಿಲ್‌ ಅವರನ್ನು ಸರ್ಕಾರ ನೇಮಕ ಮಾಡಿದೆ.

     ಜಿ.ಕೆ.ಮಿಥುನ್‌ ಕುಮಾರ್‌ ಅವರು 2022ರ ಅಕ್ಟೋಬರ್‌ 5ರಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

     ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್‌ ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಲಾಗಿದೆ

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ