ಪಲ್ಸ್ ಪೊಲಿಯೋ ಲಸಿಕೆ ಕಡ್ಡಾಯವಾಗಿ ಹಾಕಿಸಿ
ಶಿವಮೊಗ್ಗ: ಐದು ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೊಲಿಯೋ ಲಸಿಕೆ ಹಾಕಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಅಂತರಾಷ್ಟ್ರೀಯ ಪಲ್ಸ್ ಪೊಲಿಯೋ ದಿನ ಆಗಿದ್ದರಿಂದ ರಾಜೇಂದ್ರ ನಗರದ ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನೆರೆ ರಾಷ್ಟ್ರಗಳಲ್ಲಿ ಪಲ್ಸ್ ಪೋಲಿಯೋ ಹೆಚ್ಚಾಗಿರುವುದರಿಂದ ನಮ್ಮ ಭಾರತ ದೇಶದಲ್ಲಿ ಪ್ರತಿಯೊಬ್ಬ ಐದು ವರ್ಷದ ಮಕ್ಕಳು ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹಾಕಿಸಬೇಕು ಎಂದು ತಿಳಿಸಿದರು.
ನಮ್ಮ ದೇಶ ಪಲ್ಸ್ ಪೋಲಿಯೋ ಮುಕ್ತವಾಗಿದ್ದರೂ ಕೂಡ ಮುಂಜಾಗ್ರತಾ ಕ್ರಮವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ತೊಂದರೆಯಾಗದಂತೆ ಪಲ್ಸ್ ಪೋಲಿಯೋ ಹಾಕಿಸಿಕೊಳ್ಳಬೇಕು ಎಂದರು.
ರೋಟರಿ ಕ್ಲಬ್ ಶಿವಮೊಗ್ಗ ಪೂರ್ವದ ಅಧ್ಯಕ್ಷ ಕಿಶೋರ್ ಕುಮಾರ್.ಡಿ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆದ್ದರಿಂದ ಐದು ವರ್ಷದ ಒಳಗಿನ ಮಕ್ಕಳು ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಮಕ್ಕಳು ದೇಶದ ಆಸ್ತಿ. ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ ಮಾತನಾಡಿ, ಐದು ವರ್ಷದ ಒಳಗಿನ ಮಕ್ಕಳನ್ನು ಪೋಷಕರು ಪಲ್ಸ್ ಪೋಲಿಯೋ ಕೇಂದ್ರಕ್ಕೆ ಹೋಗಿ ಪಲ್ಸ್ ಪೋಲಿಯ ಲಸಿಕೆಯನ್ನು ಹಾಕಿಸಬೇಕು ಎಂದು ತಿಳಿಸಿದರು.
ಆಶಿತ್, ಜಗದೀಶ್ ಎಸ್, ಗಂಗಪ್ಪ ಬಿ, ಬೊಮ್ಮನಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಭಾಗ್ಯ , ವಿನುತ, ಪ್ರಿಯದರ್ಶಿನಿ ಮತ್ತು ಅಮೃತಾ ಹಾಗೂ ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ