ರಕ್ತದಾನ ಅತ್ಯಂತ ಶ್ರೇಷ್ಠದಾನ. ರಕ್ತದಾನಿಗಳನ್ನ ಗುರುತಿಸಿ ಗೌರವಿಸುವುದು ಸಂಘ ಸಂಸ್ಥೆಗಳ ಆದ್ಯ ಕರ್ತವ್ಯ : ಜಿ ವಿಜಯಕುಮಾರ್

     


ಎಲ್ಲಾ ದಾನಗಳಿಗಿಂತ ರಕ್ತದಾನ ಅತ್ಯಂತ ಶ್ರೇಷ್ಠದಾನ ಇಂದು ಸಾಕಷ್ಟು ರಕ್ತದ ಕೊರತೆ ಇರುವುದರಿಂದ ಯುವಕರು ರಕ್ತದಾನ ಮಾಡಲು ಮುಂದಾಗಬೇಕು ರಕ್ತದಾನ ಮಾಡುವುದರಿಂದ ಸದೃಢವಾದ ಆರೋಗ್ಯದ ಜೊತೆಗೆ ಹೃದಯಾಘಾತದ ಪ್ರಮಾಣ ಕಡಿಮೆಯಾಗುತ್ತದೆ ಅಲ್ಲದೆ ಸದಾ ಲವಲವಿಕೆಯಿಂದ ಆರೋಗ್ಯವಂತರಾಗಿ ಬದುಕುತ್ತೇವೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್ ನುಡಿದರು 

      ಅವರು ಇಂದು ಬೆಳಿಗ್ಗೆ ಬೊಮ್ಮನಕಟ್ಟೆಯ ಇನ್ನೋವೇಟಿವ್ ಕಿಡ್ಡೋಸ್ ಪ್ರಿ ಸ್ಕೂಲ್ ವತಿಯಿಂದ ಆವರಣದಲ್ಲಿ ಹಮ್ಮಿಕೊಳ್ಳಲಾದ ಸ್ವಯಂ ಪ್ರೇರಿತ ರಕ್ತದಾನ ಚಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು ಇಂದು ಸಕಾಲದಲ್ಲಿ ರಕ್ತ ಸಿಗದೇ ಸಾಕಷ್ಟು ಜನ ತಮ್ಮ ಅಮೂಲ್ಯವಾದ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಯುವಕರು ಮೂಢನಂಬಿಕೆಯಿಂದ ಹೊರಬಂದು ರಕ್ತದಾನ ಮಾಡುವುದರ ಮುಖಾಂತರ ಸಮಾಜದಲ್ಲಿ ಪವಿತ್ರವಾದ ದಾನಿಗಳಾಗಬೇಕೆಂದು ಕರೆ ನೀಡಿದರು ಇದೇ ಸಂದರ್ಭದಲ್ಲಿ 108 ಬಾರಿ ರಕ್ತದಾನ ಮಾಡಿದ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಮಧುಸೂದನ್ ಜೆಕೆ ಯವರಿಗೆ ಇನ್ನೋವೇಟಿವ್ ಕಿಡ್ಡೋಸ್ ಪ್ರೀ ಸ್ಕೂಲ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿ ಗೌರವಿಸಲಾಯಿತು ಸನ್ಮಾನವನ್ನು ಸ್ವೀಕರಿಸಿದ ರಕ್ತದಾನಿ ಮಧುಸೂದನ್ ಅವರು ಮಾತನಾಡುತ್ತಾ ಸಮಾಜದಲ್ಲಿ ನಿಜವಾದ ದಾನಿಗಳು ರಕ್ತದಾನಿಗಳು ರಕ್ತದ ಕೊರತೆ ಅವರ ಮನೆಯಲ್ಲಿ ಬಂದಾಗ ಮಾತ್ರ ರಕ್ತದ ಬೆಲೆ ಗೊತ್ತಾಗುತ್ತದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ವೈದ್ಯರ ಸಲಹೆ ಮೇರೆಗೆ ರಕ್ತದಾನ ಮಾಡುವುದರಿಂದ ಪವಿತ್ರ ದಾನಿಗಳಾಗೋಣ ಎಂದು ಕರೆ ನೀಡಿದರು ಸಂಸ್ಥೆಯ ಕಾರ್ಯದರ್ಶಿ ಬಸವರಾಜ್ ಅವರು ಮಾತನಾಡುತ್ತಾ ಪ್ರತಿವರ್ಷ ನಮ್ಮ ಶಾಲೆಯಲ್ಲಿ ಈ ರೀತಿಯ ಮನುಕುಲದ ಸೇವೆಗಳನ್ನು  ಪೋಷಕರು ಹಾಗೂ ಸಾರ್ವಜನಿಕರ  ಸಹಕಾರದಿಂದ  ಸದಾ ಮಾಡುತ್ತಾ  ಬಂದಿದ್ದೇವೆ ಎಂದು ದಾನಿಗಳಿಗೆ ಪ್ರಮಾಣ ಪತ್ರ ಹಾಗೂ ಕಿರು ಕಾಣಿಕೆ ನೀಡಿ ಗೌರವಿಸಿದರು. ಶಾಲೆಯ ಪ್ರಾಂಶುಪಾಲರಾದ ಕೆ ರೇಖಾ ಮೇಡಂ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಬಾಲ್ಯದಲ್ಲೇ ಮಕ್ಕಳಿಗೆ ರಕ್ತದಾನದ ಬಗ್ಗೆ ಅರಿವು ಮೂಡಿಸಬೇಕು ಅದರ ಬಗ್ಗೆ ಮಾಹಿತಿ ನೀಡಿದಾಗ ಮುಂದಿನ ದಿನಗಳಲ್ಲಿ ಅವರು ಸಹ ಒಬ್ಬ ಪವಿತ್ರ ರಕ್ತದಾನಿಗಳಾಗುತ್ತಾರೆ ವಿದ್ಯಾಭ್ಯಾಸದ ಜೊತೆಗೆ ಮಕ್ಕಳಿಗೆ ಪ್ರತಿಯೊಂದು ವಿಷಯದ ಬಗ್ಗೆ ಅರಿವು ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕ ಎಂದು ನುಡಿದರು ಶಿಬಿರದಲ್ಲಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹನುಮಂತಪ್ಪ ಹಾಗೂ ವೈದ್ಯರುಗಳು ಮತ್ತು ಸಿಬ್ಬಂದಿ ವರ್ಗದವರು ಶಾಲೆ ಪೋಷಕರು ಉಪಸ್ಥಿತರಿದ್ದರು  ಶಿಕ್ಷಕರು ಪೋಷಕರು ಉಪಸ್ಥಿತರಿದ್ದರು

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ