ಭದ್ರಾವತಿಯಲ್ಲಿ ಡಬಲ್ ಮರ್ಡರ್ ರಹಸ್ಯ ಬಯಲು! 24 ಗಂಟೆಗಳಲ್ಲಿ ಆರೋಪಿಯ ಬಂಧನ!!


ಭದ್ರಾವತಿ ನಗರದ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವೃದ್ಧ ದಂಪತಿಯ ಅನುಮಾನಾಸ್ಪದ ಸಾವಿನ ಪ್ರಕರಣ ಡಬಲ್ ಮರ್ಡರ್ ಆಗಿರುವುದು ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾದ 24 ಗಂಟೆಗಳೊಳಗೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭೂತನಗುಡಿ ನಿವಾಸಿಗಳಾದ ಚಂದ್ರಪ್ಪ ಹಾಗೂ ಜಯಮ್ಮ ತಮ್ಮ ಮನೆಯಲ್ಲೇ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆರಂಭದಲ್ಲಿ ಅನುಮಾನಾಸ್ಪದ ಸಾವು ಎಂದು ಯುಡಿಆರ್ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಮೃತರ ಪುತ್ರ ವಿಶ್ವನಾಥ್ ಜಿ.ಸಿ. ನೀಡಿದ ಮರುದೂರು ಪ್ರಕರಣಕ್ಕೆ ತಿರುವು ನೀಡಿತು.

ಜನವರಿ 19ರಂದು ಮೃತರ ಮನೆಗೆ ಭೇಟಿ ನೀಡಿದ್ದ ಚಿಕ್ಕಪ್ಪನ ಮಗ ಜಿ.ಪಿ. ಮಲ್ಲೇಶ್ ಆರೋಗ್ಯ ವಿಚಾರಿಸಿದ್ದಾಗಿ ಹೇಳಿದ್ದರೂ, ನಂತರ ಸಾವಿನ ವಿಷಯ ತಿಳಿದರೂ ಶವ ನೋಡಲು ಬರದೇ ಇರುವುದು ಹಾಗೂ ಮನೆಯಲ್ಲಿದ್ದ ಚಿನ್ನಾಭರಣಗಳು ಕಾಣೆಯಾಗಿರುವುದು ಪೊಲೀಸರ ಸಂಶಯಕ್ಕೆ ಕಾರಣವಾಯಿತು.

ತನಿಖೆ ಗಟ್ಟಿಗೊಳಿಸಿದ ಹಳೆನಗರ ಪೊಲೀಸರು, ಜಿ.ಪಿ. ಮಲ್ಲೇಶ್ (44) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಆತ ಹಣದ ಆಸೆಯಿಂದಾಗಿ, ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧ ದಂಪತಿಗೆ ಪ್ರೋಪೊಫಾಲ್ ಇಂಜೆಕ್ಷನ್ ನೀಡಿ ಹತ್ಯೆ ಮಾಡಿದ್ದಾಗಿ ಶಾಕ್‌ಗೊಳಿಸುವ ಹೇಳಿಕೆ ನೀಡಿದ್ದಾನೆ.

ಮೃತದೇಹದ ಮೇಲಿದ್ದ ಹಾಗೂ ಮನೆಯ ಅಲಮಾರಿಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವುದನ್ನೂ ಆತ ಒಪ್ಪಿಕೊಂಡಿದ್ದಾನೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಗೆ ಹೆಚ್ಚುವರಿ ಎಸ್‌ಪಿ, ಡಿವೈಎಸ್ಪಿ, ಸಿಪಿಐ ಮತ್ತು ಹಳೆನಗರ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಆರೋಪಿಯನ್ನು ನ್ಯಾಯಾಂಗಕ್ಕೆ ಹಾಜರುಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ