ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ
ಇಂದು ಶಿವಮೊಗ್ಗ ನಗರದ ಶಿವಪ್ಪ ನಾಯಕ ಪ್ರತಿಮೆಯ ಸಮೀಪದಲ್ಲಿರುವ ಪಾವನ ಕನ್ನಡ ದಿನಪತ್ರಿಕೆ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕದ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಜನಮನ ರಕ್ಷಣಾ ವೇದಿಕೆ ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ. ಜನಾರ್ಧನ ಸಾಲಿಯಾನ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕಾ ವಿತರಕರ ಜಿಲ್ಲಾ ಘಟಕದ ಅಧ್ಯಕ್ಷರಾದ ಎನ್. ಮಾಲತೇಶ್ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ರಾಮು ಜಿ, ಸಂಘಟನಾ ಕಾರ್ಯದರ್ಶಿ ಪರಶುರಾಮ್ ರಾವ್ (ಭದ್ರಾವತಿ), ನಿರ್ದೇಶಕರಾದ ಹರ್ಷ ಎನ್.ಆರ್, ಸದಸ್ಯರಾದ ಯೋಗೇಶ್ ಪಿ, ದುರ್ಘೋಜಿ, ಪ್ರಾಣೇಶ್, ಧನಂಜಯ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅದೇ ರೀತಿ ಕನ್ನಡ ರಕ್ಷಣಾ ವೇದಿಕೆ – ಜನಮನ ರಾಜ್ಯ ಸಂಘಟನೆಯ ಜಿಲ್ಲಾ ಉಸ್ತುವಾರಿಗಳಾದ ಕಿರಣ್ ಕೆ, ಉಪಾಧ್ಯಕ್ಷರಾದ ವೀಣಾ ಎಚ್, ಸುಮಾ ಕೆ.ಎಸ್, ಪುಷ್ಪಾ ಎ, ರಾಮು ವಿ, ಸಂಗೇಶ್ವರ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಗಣರಾಜ್ಯೋತ್ಸವದ ಮಹತ್ವವನ್ನು ಸ್ಮರಿಸಿ, ದೇಶದ ಸಂವಿಧಾನ ಮೌಲ್ಯಗಳನ್ನು ಕಾಪಾಡುವ ಸಂಕಲ್ಪವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ