ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ

 


ಶಿವಮೊಗ್ಗ: ಶಿಕಾರಿಪುರದಲ್ಲಿ ಖಾತೆ ಬದಲಾಯಿಸಿಕೊಡಲು ಒಂದು ಲಕ್ಷ ರೂ. ಲಂಚ ಪಡೆಯುವಾಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಿಠ್ಠಲ ಕೋಲ್ಹರ ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿ. ಖಾತಾ ಮಾಡಿಕೊಡಲು 1 ಲಕ್ಷ ರೂ. ಹಣ ಸ್ವೀಕರಿಸುವಾಗ ಲೋಕಯುಕ್ತ ಪೊಲೀಸರು ಬಂಧಿಸಿದ್ದಾರೆ.

ಶಿಕಾರಿಪುರ ತಾಲೂಕಿನ ಚಿಕ್ಕಬಂಜೂರಿನಲ್ಲಿರುವ ಜಮೀನಿನ ಖಾತೆ ಮಾಡಿಸಲು ಶಿಕಾರಿಪುರದ ತಾಲೂಕು ಕಚೇರಿಯ ಕಂದಾಯ ಇಲಾಖೆಗೆ ಜಮೀನಿನ ಮಾಲೀಕಿ ಜಕ್ರಿಯಾ ಬೇಗ್ ಎಂಬುವರು ಅವರಿಂದ ನಾಲ್ಕು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 

ಜಕ್ರಿಯಾ ಬೇಗ್ ಅವರಿಗೆ 4 ಲಕ್ಷ ಕೊಡಲು ಮನಸ್ಸಿಲ್ಲದ ಕಾರಣ ಲೋಕಾಯುಕ್ತರನ್ನ ಭೇಟಿ ನೀಡಿದ್ದರು. ಇಂದು ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಕೊಲ್ಹರ 1 ಲಕ್ಷ ರೂ. ಸ್ವೀಕರಿಸುವಾಗ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ