ಪಿಜಿಆರ್ ಸಿಂಧ್ಯಾ ಅವರಿಗೆ ಗೌರವ ಡಾಕ್ಟರೇಟ್


ಶಿವಮೊಗ್ಗ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ ಪಿಜಿಆರ್ ಸಿಂಧ್ಯಾ ಅವರಿಗೆ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುತ್ತಿದೆ.

ಫೆಬ್ರವರಿ 24ರಂದು ಬೆಳಗ್ಗೆ 10.30ಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಅಂಬೇಡ್ಕರ್ ಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪದವಿ ಪ್ರದಾನ ಮಾಡುವರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಅವರಿಗೆ ಶಿವಮೊಗ್ಗ ಜಿಲ್ಲಾ ಶಾಖೆ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಅಭಿನಂದನೆ ತಿಳಿಸಿದ್ದಾರೆ. ಪ್ರಧಾನ ಆಯುಕ್ತ ಶಕುಂತಲಾ ಚಂದ್ರಶೇಖರ್, ಆಯುಕ್ತ ಎಸ್.ಜಿ.ಆನಂದ್, ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ವೀರೇಶಪ್ಪ, ರಾಜೇಶ್ ಅವಲಕ್ಕಿ, ಮಲ್ಲಿಕಾರ್ಜುನ್, ಚೂಡಾಮಣಿ ಈ ಪವಾರ್, ಲಕ್ಷ್ಮೀ ಕೆ.ರವಿ, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ವೇಣುಗೋಪಾಲ್, ಸರಸ್ವತಿ ನಾಗರಾಜ್ ಹಾಗೂ ಮಲೆನಾಡು ಓಪನ್ ಗ್ರೂಪ್ ಮತ್ತು ಸ್ಕೌಟ್ಸ್ ಅಂಡ್ ಗೈಡ್ ಪದಾಧಿಕಾರಿಗಳು ಶುಭಾಶಯ ತಿಳಿಸಿದ್ದಾರೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ