ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರಂತರ ಪ್ರೋತ್ಸಾಹ

ಶಿವಮೊಗ್ಗ: ಶಿಕ್ಷಣ, ಸಾಹಿತ್ಯ, ಕಲೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರಂತರ ಪ್ರೋತ್ಸಾಹ ನೀಡಲು ಹಾಗೂ ಸೇವಾ ಕಾರ್ಯಗಳಿಗೆ ಸದಾ ಸಿದ್ಧನಿದ್ದೇನೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಿರಿಯ ವಿದ್ಯಾರ್ಥಿ ಬಳಗದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ನೌಕರರ ಭವನ ನೀಡಿ ಪ್ರೋತ್ಸಾಹಿಸಿದ್ದಕ್ಕಾಗಿ ಬಳಗದ ಅಧ್ಯಕ್ಷ ಎಸ್.ಎಸ್.ವಾಗೇಶ್ ಅವರಿಂದ ಗೌರವ ಸ್ವೀಕರಿಸಿ ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯ ಹಿರಿಯ ಮುತ್ಸದ್ದಿಗಳು, ವಿದ್ವಾಂಸರು, ಸಾಹಿತಿಗಳು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರೆಲ್ಲರ ಸೇವೆಯನ್ನು ಸದಾ ಸ್ಮರಿಸುವ, ಉಳಿಸಿ ಬೆಳೆಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತೇನೆ. ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿಯಾಗಲು ಜನರು ಸದಾ ದುಡಿಯುತ್ತಿದ್ದಾರೆ. ಅವರೊಂದಿಗೆ ತಾವು ಅಳಿಲು ಸೇವೆಯಲ್ಲಿ ತೊಡಗಿಕೊಂಡಿದ್ದೇನೆ ಎಂದು ತಿಳಿಸಿದರು.

ವಾಗೇಶ್ ಮಾತನಾಡಿ, ನಮ್ಮ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಹಲವಾರು ಉದ್ಯೋಗದಲ್ಲಿ ತೊಡಗಿಸಿ ದೇಶಾದ್ಯಂತ ಕೆಲಸ ಮಾಡುತ್ತಿದ್ದು, ಅವರನ್ನು ಒಗ್ಗೂಡಿಸಲು ಬೆಂಗಳೂರಿನಲ್ಲಿ ಸೇರಿದ ಸಭೆ ಯಶಸ್ವಿಯಾಗಿದ್ದು, ಹಲವು ಉದ್ಯೋಗದಾತರು ಕರೆ ನೀಡಿ, ನಮ್ಮ ಕಾಲೇಜಿನ ಹಾಗೂ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತರಿಗೆ ಉದ್ಯೋಗ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಕಾರ್ಯಕ್ರಮದ ಸಂಯೋಜಕ ಸಮನ್ವಯ ಕಾಶಿ ಮಾತನಾಡಿ, ಸಿ.ಎಸ್.ಷಡಾಕ್ಷರಿ ಅವರು ಉತ್ತಮ ಕೆಲಸ ಮಾಡುತ್ತಿದ್ದು, ಸರ್ಕಾರಿ ನೌಕರರ ಏಳಿಗೆಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಉಪಾಧ್ಯಕ್ಷ ಕೇಶವಮೂರ್ತಿ, ನಿರ್ದೇಶಕ ಜಿ.ವಿಜಯಕುಮಾರ್, ಸಿ.ಎನ್.ಸುರೇಶ್, ಮೋಹನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ