ಯುವಜನರಲ್ಲಿ ಸೇವಾ ಮನೋಭಾವ ಬೆಳೆಸುವುದು ಅವಶ್ಯ


ಶಿವಮೊಗ್ಗ: ದೇಶದ ನಿಜವಾದ ಶಕ್ತಿ ಯುವಸಂಪತ್ತು. ಪರಿಣಾಮಕಾರಿಯಾಗಿ ಯುವಶಕ್ತಿ ಬಳಸಿಕೊಳ್ಳಬೇಕಿದೆ ಎಂದು ಯೋಗ ಶಿಕ್ಷಕ ಎಚ್.ಎಂ.ಚಂದ್ರಶೇಖರಯ್ಯ ಹೇಳಿದರು.

ಜಿಲ್ಲಾ ಸ್ಕೌಟ್ ಭವನದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಒಂದು ವಾರದ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಜನರಿಗೆ ಯೋಗ, ಪ್ರಾಣಾಯಾಮ ಮತ್ತು ಧ್ಯಾನಗಳ ಮಹತ್ವದ ಅರಿವು ಮೂಡಿಸಬೇಕಿದೆ. ಶಿಸ್ತು, ಸಂಯಮ, ದೇಶಭಕ್ತಿ, ಸಮರ್ಪಣಾ ಮನೋಭಾವ, ತ್ಯಾಗ, ಸೇವಾ ಮನೋಭಾವನೆ, ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಮಾತನಾಡಿ, ಯೋಗ, ಪ್ರಾಣಾಯಾಮ, ಧ್ಯಾನ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಭಾವನೆಗಳನ್ನು ಮೂಡಿಸುವುದರ ಜೊತೆಗೆ ದೇಹ, ಮನಸ್ಸು ಸದೃಢವಾಗಿ ಸದಾ ಲವಲವಿಕೆಯಿಂದ ಆರೋಗ್ಯವಂತರಾಗಿ ಇರಲು ಸಾಧ್ಯವಾಗುತ್ತದೆ. ವಿದ್ಯಾಭ್ಯಾಸದ ಜೊತೆಗೆ ಇಂತಹ ಶಿಬಿರಗಳಲ್ಲಿ ಪಾಲ್ಗೊಂಡರೆ ವಿದ್ಯಾರ್ಥಿಗಳು ಪರಿಪೂರ್ಣ ವ್ಯಕ್ತಿಗಳಾಗುತ್ತಾರೆ ಎಂದರು.

ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ರಾಜೇಶ್ ಅವಲಕ್ಕಿ ಮಾತನಾಡಿ, 199 ದೇಶಗಳಲ್ಲಿ ಯೋಗವನ್ನು ಎಲ್ಲಾ ದೇಶದವರು ಒಪ್ಪಿ ಯೋಗಭ್ಯಾಸ ಮಾಡುತ್ತಿದ್ದಾರೆ. ಸನಾತನ ಕಾಲದಿಂದಲೂ ಯೋಗ್ಯ ಅಭ್ಯಾಸಕ್ಕೆ ತನ್ನದೇ ಆದ ಹಿನ್ನೆಲೆ ಇದೆ ಎಂದು ತಿಳಿಸಿದರು.

ರಾಜ್ಯ ಸಂಘಟನಾ ಆಯುಕ್ತರಾದ ಸುಮನ ಶೇಖರ್ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಕಾರ್ಯಕ್ರಮಗಳನ್ನು ನಾವು ಆಯೋಜಿಸಿದ್ದೇವೆ. ವಿದ್ಯಾರ್ಥಿಗಳು ಕಾರ್ಯಕ್ರಮದ ಲಾಭಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಯೋಗ ಗುರುಗಳಿಗೆ ಸನ್ಮಾನಿಸಲಾಯಿತು. ನಾಗರತ್ನಾ ಚಂದ್ರಶೇಖರಯ್ಯ ಅವರು ವಿದ್ಯಾರ್ಥಿಗಳಿಗೆ ದೇಶಭಕ್ತಿಗಳನ್ನು ಹೇಳಿಕೊಟ್ಟರು. ವಿವಿಧ ಕಾಲೇಜುಗಳಿಂದ 170 ಪದವಿ ವಿದ್ಯಾರ್ಥಿಗಳು ಹಾಜರಿದ್ದರು.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ