ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಗೌರವಾನ್ವಿತ ಅಧಿಕಾರಿಗಳು ಹಾಗೂ ಸಿಬ್ಬಂದಿ
2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಗೌರವಾನ್ವಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಾರ್ದಿಕ ಅಭಿನಂದನೆಗಳು
ಶಿವಮೊಗ್ಗ ಜಿಲ್ಲೆಗೆ ಹೆಮ್ಮೆ ತರುವಂತೆ, ತಮ್ಮ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಮತ್ತು ಸಾರ್ವಜನಿಕ ಸೇವೆಯ ಮೂಲಕ ಗಮನಾರ್ಹ ಸಾಧನೆ ಮಾಡಿರುವ
ಶ್ರೀ ಎಸ್. ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2,
ಶ್ರೀ ಅಣ್ಣಪ್ಪ ಎನ್., ಹೆಡ್ ಕಾನ್ಸ್ಟೇಬಲ್ (71), ಹೊಳೆಹೊನ್ನೂರು ಪೊಲೀಸ್ ಠಾಣೆ,
ಶ್ರೀ ರಾಘವೇಂದ್ರ ಜಿ., ಹೆಡ್ ಕಾನ್ಸ್ಟೇಬಲ್ (336), ಹಳೇನಗರ ಪೊಲೀಸ್ ಠಾಣೆ
ಇವರು ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿರುವುದು ಅತ್ಯಂತ ಸಂತಸದ ಸಂಗತಿ.
ಇವರ ಈ ಸಾಧನೆ ಪೊಲೀಸ್ ಇಲಾಖೆಯ ಗೌರವ ಹೆಚ್ಚಿಸುವುದರ ಜೊತೆಗೆ, ಇತರ ಸಿಬ್ಬಂದಿಗೂ ಪ್ರೇರಣೆಯಾಗುತ್ತದೆ. ಸಮಾಜದ ಶಾಂತಿ, ಭದ್ರತೆ ಮತ್ತು ನ್ಯಾಯದ ಕಾಪಾಡುವಲ್ಲಿ ಇವರ ಪಾತ್ರ ಶ್ಲಾಘನೀಯವಾಗಿದೆ.
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಈ ಮೂವರು ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಹಾರ್ದಿಕ ಶುಭಾಶಯಗಳನ್ನು ಕೋರಿರುತ್ತರೆ. ಇವರ ಮುಂದಿನ ಸೇವಾ ಜೀವನದಲ್ಲಿ ಇನ್ನಷ್ಟು ಯಶಸ್ಸುಗಳು ದೊರೆಯಲಿ ಎಂದು ಚಂದ್ರೋದಯ ಪತ್ರಿಕ ಬಳಗದಿಂದ ಹಾರೈಸುತ್ತೇವೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ