ಪ್ರಾಣಿ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಶ್ಲಾಘನೀಯ ಕಾರ್ಯ
ಶಿವಮೊಗ್ಗ: ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು ಪ್ರತಿಯೊಬ್ಬ ಮನುಷ್ಯನ ಜವಾಬ್ದಾರಿ ಹಾಗೂ ಆದ್ಯ ಕರ್ತವ್ಯ ಎಂದು ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಜಿ.ಶಿವಮೂರ್ತಿ ಹೇಳಿದರು.
ಸಿಮೆಂಟ್ ತೊಟ್ಟಿಗಳನ್ನು ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ವತಿಯಿಂದ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಇಂತಹ ಪುಣ್ಯವಾದ ಕೆಲಸವನ್ನು ರೋಟರಿ ರಿವರ್ ಸೈಡ್ ಸದಸ್ಯರು ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದು ತಿಳಿಸಿದರು.
ರೋಟರಿ ಸದಸ್ಯರು ನಿರಂತರವಾಗಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಪ್ರಾಣಿ ಪಕ್ಷಿಗಳಿಗೆ ನೀರನ್ನು ಉಣಿಸುವ ಸಿಮೆಂಟ್ ತೊಟ್ಟಿಗಳನ್ನು ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ವಿತರಿಸುತ್ತಿರುವುದು ತುಂಬಾ ಉತ್ತಮ ಕಾರ್ಯ. ಮುಂದಿನ ದಿನಗಳಲ್ಲಿ ಇಂತಹ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲಿ ಎಂದು ಆಶಿಸಿದರು.
ರೋಟರಿ ರಿವರ್ ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಮಾತನಾಡಿ, ಶುಭಂ ಹೋಟೆಲ್ ಮುಂಭಾಗದಲ್ಲಿ ಇರುವ ಆಟೋ ಸ್ಟಾö್ಯಂಡ್ ಬಳಿ ಸಿಮೆಂಟ್ ತೊಟ್ಟಿ ಇಡಲಾಗಿದ್ದು, ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರು ಉಣಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ವತಿಯಿಂದ ಪ್ರಾಣಿ ಪಕ್ಷಿಗಳಿಗೆ ನೀರು ಉಳಿಸುವ ಸಿಮೆಂಟ್ ತೊಟ್ಟಿಗಳ ಉದ್ಘಾಟನೆ ಹಾಗೂ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಕಾರ್ಯದರ್ಶಿ ನಿತಿನ್ ಯಾದವ್, ಪ್ರತಾಪ್.ಎಲ್, ರವಿ.ಎಂ.ಎA., ಋತ್ವಿಕ್, ನವಲೆ ಈಶ್ವರಪ್ಪ, ನಟರಾಜ್, ಸ್ಥಳೀಯ ಆಟೋ ಚಾಲಕರು ಹಾಜರಿದ್ದರು.
.jpg)
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ