ಶಿವಮೊಗ್ಗದಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗಾಗಿ ಹೋರಾಟ
ಮೇ 18ರಿಂದ ಜಿಲ್ಲಾ ವಕೀಲರ ಸಂಘದ ಶಾಂತಿಪೂರ್ಣ ಪ್ರತಿಭಟನೆ ಶಿವಮೊಗ್ಗ, ಮೇ 18:
ಶಿವಮೊಗ್ಗದಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘವು ಮೇ 18ರಿಂದ ಶಾಂತಿಪೂರ್ಣ ಹೋರಾಟ ಮತ್ತು ಪ್ರತಿಭಟನೆ ಆರಂಭಿಸಿದೆ. ಸರ್ಕಾರ ಹಾಗೂ ಮಾನ್ಯ ಹೈಕೋರ್ಟ್ ಗಮನ ಸೆಳೆಯುವ ಉದ್ದೇಶದಿಂದ ಈ ಹೋರಾಟ ಕೈಗೊಳ್ಳಲಾಗಿದೆ ಎಂದು ಸಂಘ ತಿಳಿಸಿದೆ.
ಜಿಲ್ಲಾ ನ್ಯಾಯಾಲಯ ಆವರಣದ ವಕೀಲರ ಸಭಾಂಗಣದ ಮುಂಭಾಗದಲ್ಲಿ ಶಾಮಿಯಾನ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸೇರಿದಂತೆ ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಜನರಿಗೆ ನ್ಯಾಯಾಂಗ ಸೇವೆಗಳು ಸುಲಭವಾಗಿ ದೊರಕಬೇಕು ಎಂಬುದು ಹೋರಾಟದ ಪ್ರಮುಖ ಉದ್ದೇಶವಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ ಹಿತಾಸಕ್ತಿಯ ಈ ಬೇಡಿಕೆಗೆ ಮಾಧ್ಯಮಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದೆ. ನ್ಯಾಯಾಂಗ ವಿಕೇಂದ್ರೀಕರಣದ ಅಗತ್ಯತೆಯನ್ನು ಜನರಿಗೆ ತಲುಪಿಸಲು ಪತ್ರಿಕೆ ಹಾಗೂ ಮಾಧ್ಯಮ ಸಂಸ್ಥೆಗಳು ಬೆಂಬಲಿಸಬೇಕೆಂದು ಸಂಘ ವಿನಂತಿಸಿದೆ.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್. ರಾಘವೇಂದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಸ್.ಎ. ಶ್ರೀನಿವಾಸ್ ಸೇರಿದಂತೆ ಪದಾಧಿಕಾರಿಗಳು ಈ ಹೋರಾಟಕ್ಕೆ ನೇತೃತ್ವ ವಹಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ