ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ದ್ವಿತೀಯ ವಾರ್ಷಿಕೋತ್ಸವ ಯಶಸ್ವಿ

 


ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಶಿವಮೊಗ್ಗ ಜಿಲ್ಲಾ  ಆಯೋಜಿಸಿದ್ದ ಸಂಘದ 2ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ಭಾನುವಾರ ಯಶಸ್ವಿಯಾಗಿ ಜರುಗಿತು.

 ಕಾರ್ಯಕ್ರಮವನ್ನು ಶಾಸಕ ಚನ್ನಬಸಪ್ಪ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಪತ್ರಕರ್ತರ ಪಾತ್ರ ಅತ್ಯಂತದ್ದಾಗಿದ್ದು, ಪ್ರಜಾಪ್ರಭುತ್ವದ ಬಲವರ್ಧನೆಗೆ ಮಹತ್ವವಿದೆ.  ಪತ್ರಕರ್ತರು ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

 ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ, ಆಯನೂರು ಮಂಜುನಾಥ್, ಮಾಜಿ ಶಾಸಕ ಚಂದ್ರಶೇಖರಪ್ಪ, ಯುವ ನಾಯಕ ಯೋಗೇಶ್, ಜಿಲ್ಲಾಧ್ಯಕ್ಷ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಸತೀಶ್ ಗೌಡ, ಷಡಕ್ಷರಪ್ಪ, ವಿಷ್ಣುಪ್ರಸಾದ್, ಅಣ್ಣಪ್ಪ ಸೇರಿದಂತೆ ಹಲವರು  ಸೇರಿವೆ.

ಕಾರ್ಯಕ್ರಮದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾ ಪುರಸ್ಕಾರ ನೀಡಿ  ಗೌರವಿಸಲಾಯಿತು.  ಜೊತೆಗೆ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಲವು ಪತ್ರಕರ್ತರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

 ಸಂಘದ ಪದಾಧಿಕಾರಿಗಳು ಮಾತನಾಡಿ, ಪತ್ರಕರ್ತರ ಹಕ್ಕುಗಳ ರಕ್ಷಣೆ ಹಾಗೂ ಸಂಘಟನೆಯ ಬಲವರ್ಧನೆಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳು  ಒಳಗೊಂಡಿತ್ತು.

 ಒಟ್ಟಾರೆ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ಹಾಗೂ ಪತ್ರಕರ್ತರ ಸೇವೆಗೆ ಗೌರವ ಸಲ್ಲಿಸಿದ ಈ ಕಾರ್ಯಕ್ರಮ ಅರ್ಥಪೂರ್ಣವಾಗಿ ಹಾಗೂ  ಯಶಸ್ವಿಯಾಗಿ ನೆರವೇರಿತು.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ