ಶಿವಮೊಗ್ಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ: ತನಿಖಾ ತಂಡ ರಚಿಸಿದ ಮಹಾನಗರ ಪಾಲಿಕೆ
ಶಿವಮೊಗ್ಗ: ನಗರದ ಹೊಸಮನೆ ಪ್ರದೇಶದ ಶ್ರೀ ದೊಡ್ಡಮ್ಮ ಜಲದುರ್ಗಮ್ಮ ದೇವಸ್ಥಾನದ ಪಕ್ಕದಲ್ಲಿರುವ 50x60 ಅಳತೆಯ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಜಾಗದ ದಾಖಲೆಗಳ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮಹಾನಗರ ಪಾಲಿಕೆ ತನಿಖಾ ತಂಡವನ್ನು ರಚಿಸಿದೆ.
ದೇವಸ್ಥಾನ ಸಮಿತಿಯ ಪ್ರಧಾನ ಕಾರ್ಯದರ್ಶಿ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಜಾಗದ ಬಿ-ಖಾತೆ ಹಾಗೂ ಕಟ್ಟಡ ನಿರ್ಮಾಣ ಅನುಮತಿ ನೀಡುವಲ್ಲಿ ನಿಯಮ ಉಲ್ಲಂಘನೆ ನಡೆದಿದೆಯೇ ಎಂಬ ಕುರಿತು ಪರಿಶೀಲನೆ ನಡೆಯಲಿದೆ.
ಮಹಾನಗರ ಪಾಲಿಕೆಯ ವಲಯ-1 ಅಧಿಕಾರಿಗಳನ್ನೊಳಗೊಂಡ ವಿಶೇಷ ತಂಡ ಸ್ಥಳ ಪರಿಶೀಲನೆ ನಡೆಸಿ, ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ನೋಟಿಸ್ ಜಾರಿ ಮಾಡಿ, 10 ದಿನಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.
ಈ ಪ್ರಕರಣ ನಗರದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಅಕ್ರಮ ನಿರ್ಮಾಣದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ