ಮಾದಕ ವಸ್ತು ವ್ಯಸನ ವಿರೋಧಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ 5 ಕೆ ಮ್ಯಾರಥಾನ್


ಶಿವಮೊಗ್ಗ, ಜೂನ್ 25: ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆಯ ಅಂಗವಾಗಿ ಗುರುವಾರ ಶಿವಮೊಗ್ಗ ನಗರದಲ್ಲಿ 5 ಕಿ.ಮೀ. ಮ್ಯಾರಥಾನ್‌ನ್ನು ಹಮ್ಮಿಕೊಳ್ಳಲಾಯಿತು.

ಬೆಳಗ್ಗೆ 6 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಆಯೋಜಿಸಿದ್ದ ಮ್ಯಾರಥಾನ್‌ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹೇಮಂತ್ ಎನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎ.ಜಿ. ಕಾರಿಯಪ್ಪ ಉಪಸ್ಥಿತರಿದ್ದರು.

ಮ್ಯಾರಥಾನ್ ಡಿಎಆರ್ ಪೊಲೀಸ್ ಮೈದಾನದಿಂದ ಆರಂಭವಾಗಿ ಅಶೋಕ ವೃತ್ತ, ಎ.ಎ. ವೃತ್ತ, ಗೋಪಿ ವೃತ್ತ, ಜೈಲ್ ವೃತ್ತ ಹಾಗೂ ಹೆಲಿಪ್ಯಾಡ್ ವೃತ್ತದ ಮಾರ್ಗವಾಗಿ ಸಂಚರಿಸಿ ಮತ್ತೆ ಡಿಎಆರ್ ಮೈದಾನದಲ್ಲಿ ಸಮಾಪ್ತಿಯಾಯಿತು.


ಕಾರ್ಯಕ್ರಮದ ಬಳಿಕ ಮ್ಯಾರಥಾನ್‌ನಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಮ್ಯಾರಥಾನ್‌ನಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು.


ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಣಿಕೆಯನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕೆಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ನೀಡಲಾಯಿತು.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ