ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ಪರಿಸರ ದಿನಾಚರಣೆ
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ಪರಿಸರ ದಿನಾಚರಣೆಯ ಪ್ರಯುಕ್ತವಾಗಿ ಶಿವಮೊಗ್ಗದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ, ಆಲ್ಕೊಳದಲ್ಲಿ ಹಲವು ಜಾತಿಯ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ಅಧ್ಯಕ್ಷರಾದ JFD ಗಾನವಿ ಸುದರ್ಶನ್ ರವರು ಶಾಲೆಯ ಮಕ್ಕಳಿಗೆ ಪರಿಸರದ ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ಪ್ಲಾಸ್ಟಿಕ್ ಮುಕ್ತ ಸಮಾಜವನ್ನು ಸೃಷ್ಟಿ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು. ಪ್ರತಿಯೊಬ್ಬರು ಮನೆಯ ಮುಂದೆ ಒಂದೊಂದು ಗಿಡವನ್ನು ನೆಡುವ ಮೂಲಕ "ಹಸಿರು ಶಿವಮೊಗ್ಗವನ್ನು" ಸ್ಥಾಪಿಸೋಣ ಎಂದು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ಸುದರ್ಶನ್ ತಾಯಿಮನೆ , ಸ್ಮಿತಾ ಮೋಹನ್, ಕಾರ್ಯದರ್ಶಿಗಳಾದ ತೇಜಸ್ವಿನಿ, ನಿರ್ಮಲ, ಗಿರಿ ಮಲ್ಲಿಕಾ, ನೇತ್ರಾವತಿ ಇನ್ನಿತರರು ಭಾಗವಹಿಸಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ