ಪತ್ರಿಕಾ ವಿತರಕರಿಗೆ ಜರ್ಕಿನ್, ಶಾಲಾ ಮಕ್ಕಳಿಗೆ ಬ್ಯಾಗ್ ಉಚಿತ ವಿತರಣೆ
ಶಿವಮೊಗ್ಗ: ನಗರದ ನೆಹರು ರಸ್ತೆಯಲ್ಲಿರುವ ಸಮರ್ಥ ಎಂಟರ್‌ಪ್ರೈಸಸ್ ವತಿಯಿಂದ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಶಿವಮೊಗ್ಗ ಜಿಲ್ಲಾ ಘಟಕದ ಪತ್ರಿಕಾ ವಿತರಕರಿಗೆ ಉಚಿತ ಜರ್ಕಿನ್‌ಗಳನ್ನು ಹಾಗೂ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರ ಸೇವೆಯನ್ನು ಸ್ಮರಿಸಿ ಅವರನ್ನು ಗೌರವಿಸುವ ಉದ್ದೇಶದಿಂದ ಜರ್ಕಿನ್‌ಗಳನ್ನು ವಿತರಿಸಲಾಯಿತು. ಅಲ್ಲದೇ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಶಾಲಾ ಮಕ್ಕಳಿಗೆ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶಾಲಾ ಬ್ಯಾಗ್‌ಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಹರೀಶ್ ಬಾಬು, ಶಾರದಾ, ಸಮರ್ಥ, ಪ್ರೀತಮ್, ಅಬ್ದುಲ್ ಜಬ್ಬಾರ್, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಎನ್. ಮಾಲತೇಶ್, ಉಪಾಧ್ಯಕ್ಷ ರಾಮು ಜಿ., ಪ್ರಧಾನ ಕಾರ್ಯದರ್ಶಿ ನಜೀರ್, ಪಾರ್ಥಿಬನ್, ದುರ್ಗೋಜಿ, ಪ್ರಶಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಈ ವೇಳೆ ಮಾತನಾಡಿದ ಗಣ್ಯರು, ಪತ್ರಿಕಾ ವಿತರಕರು ಪ್ರತಿದಿನ ಮುಂಜಾನೆ ಜನರಿಗೆ ಸುದ್ದಿ ತಲುಪಿಸುವ ಮಹತ್ತರ ಸೇವೆ ಸಲ್ಲಿಸುತ್ತಿದ್ದು, ಅವರ ಶ್ರಮವನ್ನು ಗುರುತಿಸಿ ಇಂತಹ ಪ್ರೋತ್ಸಾಹದಾಯಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಮಕ್ಕಳಿಗೆ ಬ್ಯಾಗ್‌ಗಳನ್ನು ವಿತರಿಸಿರುವ ಸಮರ್ಥ ಎಂಟರ್‌ಪ್ರೈಸಸ್‌ನ ಸಮಾಜಮುಖಿ ಕಾರ್ಯವನ್ನು ಉಪಸ್ಥಿತರು ಶ್ಲಾಘಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ