ರಾಜ್ಯದಲ್ಲಿ ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಅನುಮತಿ ನೀಡದಂತೆ ಮನವಿ

 


ಚನ್ನಗಿರಿ, ಜೂನ್ 22: ರಾಜ್ಯದಲ್ಲಿ ವಿದ್ಯುತ್ ವಿತರಣೆಗೆ ಖಾಸಗಿ ಸಂಸ್ಥೆಯಾದ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕೋಡಿಹಳ್ಳಿ ಚಂದ್ರಶೇಖರ್ ಬಣದ ಚನ್ನಗಿರಿ ತಾಲ್ಲೂಕು ಸಮಿತಿಯು ಮನವಿ ಸಲ್ಲಿಸಿದೆ.

ಸಂಘದ ಅಧ್ಯಕ್ಷ ಬಸವಾಪುರ ರಂಗನಾಥ್ ಹಾಗೂ ಇತರ ಪದಾಧಿಕಾರಿಗಳು ಸಲ್ಲಿಸಿರುವ ಮನವಿಯಲ್ಲಿ, ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದಲ್ಲಿ ವಿದ್ಯುತ್ ವಿತರಣೆಗೆ ಅನುಮತಿ ಕೋರಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿರುವುದು ತಿಳಿದುಬಂದಿದೆ. ಈ ಅರ್ಜಿಗೆ ಅನುಮತಿ ನೀಡಿದಲ್ಲಿ ರಾಜ್ಯದ ವಿದ್ಯುತ್ ಸರಬರಾಜು ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು, ಸಾರ್ವಜನಿಕರು, ರೈತರು ಹಾಗೂ ಕೈಗಾರಿಕೋದ್ಯಮಿಗಳಿಗೆ ಅನ್ಯಾಯವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಆದ್ದರಿಂದ, ವಿದ್ಯುತ್ ಕಾಯ್ದೆ–2003ರ ಕಲಂ 108ರ ಅಡಿಯಲ್ಲಿ ಟಾಟಾ ಪವರ್ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಿ, ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿದ್ಯುತ್ ವಿತರಣಾ ಸಂಸ್ಥೆಗಳ ಮೂಲಕವೇ ವಿದ್ಯುತ್ ಸರಬರಾಜು ಮುಂದುವರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂಬಂಧ ಸಲ್ಲಿಕೆಯಾಗಿರುವ ಮೂಲ ಮನವಿಯನ್ನು ಮುಂದಿನ ಅಗತ್ಯ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಚನ್ನಗಿರಿ ತಹಶೀಲ್ದಾರ್ ಕಚೇರಿಯಿಂದ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ