ಸರ್ಕಾರಿ ನೌಕರರು ಬಿಡುವಿನ ವೇಳೆಯನ್ನು ಸದುಪಯೋಗಪಡಿಸಿಕೊಳ್ಳಬೇಕು: ಕೋಗಲೂರು ತಿಪ್ಪೇಸ್ವಾಮಿ

 


ಶಿವಮೊಗ್ಗ, ಜೂ.17: ಸರ್ಕಾರಿ ನೌಕರರು ತಮ್ಮ ಕರ್ತವ್ಯದ ಅವಧಿಯ ನಂತರದ ಸಮಯ ಹಾಗೂ ರಜಾದಿನಗಳನ್ನು ಸದುಪಯೋಗಪಡಿಸಿಕೊಂಡು ತಮ್ಮಲ್ಲಿರುವ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕಲಾತ್ಮಕ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಹೇಳಿದರು.

ನಗರದ ಮಥುರ ಪ್ಯಾರಡೈಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಭೆ ಹಾಗೂ ಕವಿಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ನೌಕರರಲ್ಲಿರುವ ವಿವಿಧ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಪರಿಷತ್ತು ಕಾರ್ಯನಿರ್ವಹಿಸುತ್ತಿದ್ದು, ನೌಕರರು ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯ, ಸಂಗೀತ, ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಪರಿಷತ್ತಿನ ಪದಾಧಿಕಾರಿಗಳು ಹಾಗೂ 15ಕ್ಕೂ ಹೆಚ್ಚು ಕವಿಗಳು ಭಾಗವಹಿಸಿ ತಮ್ಮ ಕವನಗಳನ್ನು ವಾಚಿಸಿದರು.

ಗೌರವಾಧ್ಯಕ್ಷ ಜಿ. ಕ್ರೊಟ್ರಪ್ಪ ಉಪಸ್ಥಿತರಿದ್ದರು. ರಾಜ್ಯ ಸಮಿತಿಯ ಸಹ ಕಾರ್ಯದರ್ಶಿ ಶಿವಾನಾಯಕ ಅವರು ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಸತೀಶ್ ಪಿ.ಕೆ. ಕಾರ್ಯಕ್ರಮ ನಿರೂಪಿಸಿದರು. ಆರಂಭದಲ್ಲಿ ದಿವ್ಯಾ ಪ್ರಾರ್ಥನೆ ನೆರವೇರಿಸಿದರು. ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವೈ. ಶೋಭಾ ಸತೀಶ್ ಸ್ವಾಗತಿಸಿದರು.

ಕವಿಗೋಷ್ಠಿಯ ನಿರ್ವಹಣೆಯನ್ನು ಉಪಾಧ್ಯಕ್ಷೆ ಲೋಲಾಕ್ಷಿ ಅವರು ವಹಿಸಿಕೊಂಡಿದ್ದರು. ಶ್ರೀಮತಿ ಗೀತಾಬಾಯಿ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ