ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದ ಶಿವಮೊಗ್ಗದ ಯುವ ಸಂಶೋಧಕ ಸಚಿನ್ ಎನ್.ಜೆ

 


ಶಿವಮೊಗ್ಗ, ಜೂನ್ 21: ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸಚಿನ್ ಎನ್.ಜೆ ಅವರಿಗೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಘೋಷಿಸಿದೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, "ಅಭಿವೃದ್ಧಿ ಸಂವಹನದ ಮಾಧ್ಯಮವಾಗಿ ಚಲನಚಿತ್ರ: ಆಯ್ದ ಕನ್ನಡ ಚಲನಚಿತ್ರಗಳ ಒಂದು ವಿಶ್ಲೇಷಣಾತ್ಮಕ ಅಧ್ಯಯನ" ಎಂಬ ವಿಷಯದ ಕುರಿತು ಸಚಿನ್ ಅವರು ಸಂಶೋಧನಾ ಮಹಾಪ್ರಬಂಧವನ್ನು ಮಂಡಿಸಿದ್ದರು. ಅವರ ಸಂಶೋಧನಾ ಕಾರ್ಯವು ಕನ್ನಡ ಚಲನಚಿತ್ರಗಳು ಅಭಿವೃದ್ಧಿ ಸಂವಹನದಲ್ಲಿ ವಹಿಸುವ ಪಾತ್ರ ಮತ್ತು ಸಾಮಾಜಿಕ ಬದಲಾವಣೆಯ ಮೇಲೆ ಅವುಗಳ ಪ್ರಭಾವವನ್ನು ವಿಶ್ಲೇಷಿಸುವ ಮಹತ್ವದ ಅಧ್ಯಯನವಾಗಿದೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ನೆಗವಾಡಿ ಗ್ರಾಮದವರಾದ ಸಚಿನ್ ಎನ್.ಜೆ ಅವರು ಜಯಪ್ಪ ಹಾಗೂ ಸುಜಾತ ದಂಪತಿಯ ಪುತ್ರರಾಗಿದ್ದಾರೆ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ರಿಪ್ಪನ್‌ಪೇಟೆ ಸಮೀಪದ ಚಂದಳ್ಳಿಯಲ್ಲಿ ಪೂರ್ಣಗೊಳಿಸಿದ ಅವರು, ಪ್ರೌಢ ಮತ್ತು ಕಾಲೇಜು ಶಿಕ್ಷಣವನ್ನು ರಿಪ್ಪನ್‌ಪೇಟೆಯಲ್ಲಿಯೇ ಮುಗಿಸಿ ಉನ್ನತ ಶಿಕ್ಷಣದತ್ತ ಹೆಜ್ಜೆ ಹಾಕಿದ್ದರು.

ಬಳಿಕ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದ ಅವರು, ಸಂಶೋಧನಾ ಕ್ಷೇತ್ರದಲ್ಲಿ ನಿರಂತರ ಆಸಕ್ತಿ ತೋರಿಸಿ ಇದೀಗ ಪಿಎಚ್.ಡಿ ಪದವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪ್ರಸ್ತುತ ಹಾಸನದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು (ಸ್ವಾಯತ್ತ)ದಲ್ಲಿ ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಚಿನ್ ಅವರ ಈ ಸಾಧನೆಗೆ ಕುಟುಂಬದವರು, ಸ್ನೇಹಿತರು, ಶಿಕ್ಷಕರು ಹಾಗೂ ಪತ್ರಿಕೋದ್ಯಮ ವಲಯದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ