ಜನ್ಮದಿನದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಪೆನ್ನು ವಿತರಣೆ

 


ಶಿವಮೊಗ್ಗ, ಜೂನ್ 24: ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆ ಮಾಡುತ್ತಿರುವ ಸಪ್ತಗಿರಿ ಗ್ರೂಪ್ ಮಾಲೀಕರು ಹಾಗೂ ಕರ್ನಾಟಕ ರಾಜ್ಯ ಉಪ್ಪಾರ ಸಮುದಾಯದ ಮುಖಂಡರಾದ ಆರ್. ವಿಶ್ವನಾಥ್ ಉಪ್ಪಾರ ನಲ್ಲೂರು ಅವರ ಜನ್ಮದಿನದ ಪ್ರಯುಕ್ತ ಕಾಶಿಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ನು ಹಾಗೂ ಸಿಹಿ ವಿತರಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ, ಶಿಕ್ಷಣದ ಮಹತ್ವದ ಕುರಿತು ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಸಮಾಜದ ಪ್ರತಿಯೊಬ್ಬರೂ ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಹಾಲನಾಯಕ್, ಭಗೀರಥ ಸ್ಪೋರ್ಟ್ಸ್ ಅಕಾಡೆಮಿಯ ಅಧ್ಯಕ್ಷರಾದ ಮುರಳಿ ಹೆಚ್. ಸಣ್ಣಕ್ಕಿ, ಕಾರ್ತಿಕ್, ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಮಾಲತೇಶ್, ಕನ್ನಡಪರ ಹೋರಾಟಗಾರ ಜೀವನ್ ಹಾಗೂ ಶಾಲೆಯ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸುವ ಮೂಲಕ ಆರ್. ವಿಶ್ವನಾಥ್ ಉಪ್ಪಾರ ನಲ್ಲೂರು ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ