ಬಾಂಬ್ ಬೆದರಿಕೆ ಹಿನ್ನೆಲೆ ನ್ಯಾಯಾಲಯ ಆವರಣದಲ್ಲಿ ಪೊಲೀಸ್ ಕಟ್ಟೆಚ್ಚರ


ಶಿವಮೊಗ್ಗ, ಜೂನ್ 24: ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಇ-ಮೇಲ್ ಮೂಲಕ ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.

ಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೀಡಿದ ಮಾಹಿತಿಯ ಪ್ರಕಾರ, ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿ ತಪಾಸಣೆ ಕಾರ್ಯ ಕೈಗೊಳ್ಳಲಾಗಿದೆ. ನ್ಯಾಯಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಾಂಬ್ ಪತ್ತೆ ದಳ ಹಾಗೂ ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದು, ವಾಹನಗಳ ತಪಾಸಣೆಯನ್ನೂ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸುವ ವಕೀಲರು, ಕಕ್ಷೀದಾರರು ಹಾಗೂ ಸಾರ್ವಜನಿಕರು ಪೊಲೀಸ್ ಇಲಾಖೆಯ ಭದ್ರತಾ ಕ್ರಮಗಳಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಶಿವಮೊಗ್ಗ ವಕೀಲರ ಸಂಘದ ಕಾರ್ಯಕಾರಿ ಮಂಡಳಿಯ ಪರವಾಗಿ ಪ್ರಕಟಣೆ ನೀಡಿರುವ ನಿರ್ದೇಶಕರು, ಭದ್ರತಾ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಎಲ್ಲರೂ ಸಹನೆ ಮತ್ತು ಸಹಕಾರ ನೀಡುವಂತೆ ಕೋರಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಬೆದರಿಕೆ ಇ-ಮೇಲ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.


ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ