ಭದ್ರಾವತಿಯಲ್ಲಿ ‘ಇಸ್ಪೀಟ್ ಕಿಂಗ್’ ವಿಶ್ವನಾಥ್ ಮೇಲೆ ಮಾರಕಾಸ್ತ್ರ ದಾಳಿ

 


ಭದ್ರಾವತಿ, ಜೂನ್ 8, ಚಂದ್ರೋದಯ ಪತ್ರಿಕೆ : ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ಸೋಮವಾರ ನಡೆದ ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಮಾಹಿತಿಯ ಪ್ರಕಾರ, ಸುಮಾರು 6 ರಿಂದ 7 ಮಂದಿಯ ತಂಡ ವಿಶ್ವನಾಥ್ ಅವರನ್ನು ಏಕಾಏಕಿ ಅಡ್ಡಗಟ್ಟಿ ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ದಾಳಿಕೋರರು ಅವರನ್ನು ಬೆನ್ನಟ್ಟಿ ಹಿಡಿದು ಮನಬಂದಂತೆ ಹಲ್ಲೆ ನಡೆಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ತೀವ್ರ ರಕ್ತಸ್ರಾವಗೊಂಡ ವಿಶ್ವನಾಥ್ ಅವರನ್ನು ಸ್ಥಳೀಯರು ಹಾಗೂ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

"ನಾಲ್ಕು ಜನ ಅನುಮಾನಾಸ್ಪದ ವ್ಯಕ್ತಿಗಳು ಇದ್ದ  ಕಾರು ಎಂಬ ಮಾಹಿತಿ"

ಭದ್ರಾವತಿ ಪ್ರದೇಶದಲ್ಲಿ "ಇಸ್ಪೀಟ್ ಕಿಂಗ್" ಎಂದೇ ಪರಿಚಿತರಾಗಿದ್ದ ವಿಶ್ವನಾಥ್ ಮೇಲೆ ನಡೆದ ದಾಳಿಗೆ ವೈಯಕ್ತಿಕ ವೈಷಮ್ಯ ಅಥವಾ ಇಸ್ಪೀಟ್ ಚಟುವಟಿಕೆಗಳಿಗೆ ಸಂಬಂಧಿಸಿದ ಹಳೆಯ ದ್ವೇಷ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆ ಹಾಗೂ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ಮುಂದುವರಿಸಿದ್ದಾರೆ.

ಈ ಘಟನೆ ಭದ್ರಾವತಿ ನಗರದಲ್ಲಿ ಆತಂಕ ಸೃಷ್ಟಿಸಿದ್ದು, ಸಾರ್ವಜನಿಕರಲ್ಲಿ ಭದ್ರತೆ ಕುರಿತು ಪ್ರಶ್ನೆಗಳು ಮೂಡಿವೆ. ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ