ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಎಂ.ಕೆ. ಸುರೇಶ್ ಕುಮಾರ್ ಅವರಿಗೆ ಶ್ರದ್ಧಾಂಜಲಿ
ಶಿವಮೊಗ್ಗ: ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು, ಮಾಜಿ ನಗರಸಭೆ ಅಧ್ಯಕ್ಷರು, ಕೋಟೆ ಮಾರಿಕಾಂಬ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು, ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿ ಎಂ.ಕೆ. ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ಅವರ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಸಭೆಯಲ್ಲಿ ದಿವಂಗತ ಎಂ.ಕೆ. ಸುರೇಶ್ ಕುಮಾರ್ ಅವರ ಸಮಾಜಮುಖಿ ಸೇವೆ, ಸಹಕಾರ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸಾರ್ವಜನಿಕ ಜೀವನದಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಲಾಯಿತು. ಅವರ ಅಗಲಿಕೆಯಿಂದ ಸಹಕಾರ ಕ್ಷೇತ್ರ ಹಾಗೂ ಶಿವಮೊಗ್ಗ ನಗರಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಇದೇ ವೇಳೆ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಕುಟುಂಬ ವರ್ಗದವರಿಗೆ, ಬಂಧು-ಬಳಗ ಮತ್ತು ಸ್ನೇಹಿತರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ. ರಂಗನಾಥ್, ಉಪಾಧ್ಯಕ್ಷ ಸಿ. ಹೊನ್ನಪ್ಪ, ಖಜಾಂಚಿ ಘನಶಾಮ್, ಹಿರಿಯ ನಿರ್ದೇಶಕರಾದ ಉಮಾಶಂಕರ ಉಪಾಧ್ಯ, ಎಸ್.ಪಿ. ಶೇಷಾದ್ರಿ, ಜಿ. ಚಂದ್ರಶೇಖರ್, ಜಿ. ರಾಜು, ಎಂ. ರಾಕೇಶ್, ಎಸ್.ಎನ್. ಮಹೇಶ್, ಬಿ. ಲ...