ಭಾವಪೂರ್ಣ ಶ್ರದ್ಧಾಂಜಲಿ
ಎಂ. ಕೆ. ಸುರೇಶ್ ಕುಮಾರ್ (ಚಾಲುಕ್ಯ ಸೂರಿ)
ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು, ಮಾಜಿ ನಗರಸಭಾ ಅಧ್ಯಕ್ಷರು, ಕೋಟೆ ಮಾರಿಕಾಂಬ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು, ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಸಮಿತಿಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎಂ. ಕೆ. ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ಅವರು ಇಂದು ದೈವಾಧೀನರಾದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.
ಸಾರ್ವಜನಿಕ ಜೀವನದಲ್ಲಿ ತಮ್ಮ ಸೇವೆ, ಸಾಮಾಜಿಕ ಕಳಕಳಿ ಹಾಗೂ ನಾಯಕತ್ವದ ಮೂಲಕ ಅವರು ಸಮಾಜಕ್ಕೆ ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಅಪಾರ ಸ್ನೇಹಿತರಿಗೆ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.
ಓಂ ಶಾಂತಿ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ